ADVERTISEMENT

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 31ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 16:00 IST
Last Updated 16 ಜುಲೈ 2024, 16:00 IST
   

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2024–25) ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ನಿಗದಿಪಡಿಸಿದ್ದ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಎಲ್ಲ ವೃಂದಗಳಿಗೆ (ಗ್ರೂಪ್‌ ಎ, ಬಿ, ಡಿ, ಸಿ) ಅನ್ವಯವಾಗುವಂತೆ, ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ6ರಷ್ಟನ್ನು ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಅಧಿಕಾರವನ್ನು ಆಯಾ ಇಲಾಖೆಗಳ ಸಚಿವರಿಗೆ ನೀಡಲಾಗಿದೆ.

ರಾಜ್ಯದಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಜೂನ್‌ 15ರಂದು ಆದೇಶ ಹೊರಡಿಸಿದ್ದ ಸರ್ಕಾರ, ಜುಲೈ 9ರವರೆಗೆ ಅವಕಾಶವನ್ನು ನೀಡಿತ್ತು. ಮತ್ತೆ 15ರವರೆಗೆ ವಿಸ್ತರಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.