ಬೆಂಗಳೂರು: ಮಂಗಳೂರಿನಲ್ಲಿ ನಡೆದಿರುವ ಬಾಂಬ್ ಸ್ಫೋಟದ ಘಟನೆಯು ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಭಾನುವಾರ ಪ್ರತಿಕ್ರಿಯಿಸಿರುವ ಅವರು, ‘ಮಂಗಳೂರಿನಲ್ಲಿ ನಡೆದಿರುವ ಸ್ಫೋಟವು ಭಯೋತ್ಪಾದಕರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ದೃಢಪಡಿಸಿದ್ದಾರೆ. ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆ ಕುರಿತು ಪೊಲಿಸರು ತ್ವರಿತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ, ಶಿಕ್ಷೆಗೊಳಪಡಿಡಬೇಕು’ ಎಂದು ಆಗ್ರಹಿಸಿದ್ದಾರೆ.
ಈ ಘಟನೆಯ ಕುರಿತು ರಾಜ್ಯದ ಜನರು ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಸಂಯಮ ಮತ್ತು ಎಚ್ಚರದಿಂದ ಇರಬೇಕು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.