ADVERTISEMENT

ತಪ್ಪು ಪಾಸಿಟಿವ್ ಮಾಹಿತಿ, ಮೂಡಿಗೆರೆ ವೈದ್ಯಾಧಿಕಾರಿಗೆ ಸೋಂಕು ತಗುಲಿಲ್ಲ: ಡಿಸಿ

​ಪ್ರಜಾವಾಣಿ ವಾರ್ತೆ
Published 23 ಮೇ 2020, 9:14 IST
Last Updated 23 ಮೇ 2020, 9:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ವೈದ್ಯಾಧಿಕಾರಿಯ ಗಂಟಲ ದ್ರವ ಮಾದರಿಯನ್ನು ಮತ್ತೆ ಪರೀಕ್ಷಿಸಲಾಗಿದ್ದು ಸೋಂಕು ದೃಢಪಟ್ಟಿಲ್ಲ, ಈ ಮೊದಲು ತಪ್ಪಾಗಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟಪಡಿಸಿದರು.

ವೈದ್ಯಾಧಿಕಾರಿಯ ಗಂಟಲ ದ್ರವ, ರಕ್ತ ಮಾದರಿಯನ್ನು ಹಾಸನ, ಶಿವಮೊಗ್ಗ ಪ್ರಯೋಗಾಲಯದಲ್ಲಿ ಮತ್ತೆ ಪರೀಕ್ಷೆ ಮಾಡಿಸಲಾಗಿದೆ. ಸೋಂಕು ದೃಢಪಟ್ಟಿಲ್ಲ. ವೈದ್ಯಾಧಿಕಾರಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವೈದ್ಯಾಧಿಕಾರಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 28 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.

ವೈದ್ಯಾಧಿಕಾರಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಪ್ರಾಥಮಿಕ ಸಂಪರ್ಕ ವಲಯದಲ್ಲಿ 485 ಮತ್ತು ದ್ವಿತೀಯ ಸಂಪರ್ಕದಲ್ಲಿ 961 ಮಂದಿಯನ್ನು ಗುರುತಿಸಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಅವರೆಲ್ಲರನ್ನು ಮನೆಗೆ ಕಳಿಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.