
ಎಲೆಕ್ಟ್ರಿಕ್ ಬಸ್ ( ಪ್ರಾತಿನಿಧಿಕ ಚಿತ್ರ)
ನವದೆಹಲಿ: ಫೇಮ್-2 ಯೋಜನೆಯಡಿ ಬೆಂಗಳೂರಿಗೆ 1,221 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಭಾರಿ ಕೈಗಾರಿಕೆ ಇಲಾಖೆಯ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಕರ್ನಾಟಕಕ್ಕೆ ಫೇಮ್-2 ಯೋಜನೆಯಡಿ 6,862 ಮತ್ತು ಪಿ.ಎಂ. ಇ-ಡ್ರೈವ್ ಯೋಜನೆಯಡಿ 13,800 ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸಲಾಗಿದೆ‘ ಎಂದು ತಿಳಿಸಿದ್ದಾರೆ.
ಪಿ.ಎಂ. ಇ-ಡ್ರೈವ್ ಯೋಜನೆಯ ಮೊದಲ ಹಂತದ 10,900 ಇ-ಬಸ್‌ಗಳ ಹಂಚಿಕೆಯಲ್ಲಿ ಬೆಂಗಳೂರಿಗೆ 4,500 ಇ-ಬಸ್‌ಗಳನ್ನು ಹಂಚಿಕೆ ಮಾಡಲಾಗಿದೆ. ಫೇಮ್-2 ಯೋಜನೆಗೆ ಒಟ್ಟು ₹517.23 ಕೋಟಿ ಅನುದಾನ ನೀಡಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.