ADVERTISEMENT

ಜನಪ್ರಿಯ ಕವಿ ಎನ್‌.ಎಸ್ ಲಕ್ಷ್ಮೀನಾರಾಯಣ ಭಟ್ಟ ನಿಧನ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 7:27 IST
Last Updated 6 ಮಾರ್ಚ್ 2021, 7:27 IST
ಲಕ್ಷ್ಮೀನಾರಾಯಣ ಭಟ್ಟ
ಲಕ್ಷ್ಮೀನಾರಾಯಣ ಭಟ್ಟ    

ಬೆಂಗಳೂರು: ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರಾದ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (84) ಅವರುಶನಿವಾರಬೆಳಗ್ಗೆ ನಿಧನರಾದರು.

ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಬನಶಂಕರಿಯಲ್ಲಿ ಇರುವ ಅವರ ಮನೆಯಲ್ಲಿ ಬೆಳಿಗ್ಗೆ 10.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಕನ್ನಡ ಸಾಹಿತ್ಯ ಲೋಕದಲ್ಲಿ, 'ಎನ್ನೆಸ್ಸೆಲ್' ಎಂದೇ ಮನೆಮಾತಾಗಿದ್ದ ಅವರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದರು. ಕನ್ನಡ, ಸಂಸ್ಕೃತ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ.

ಷೇಕ್ಸ್ಪಿಯರ್, ಎಲಿಯಟ್ಸ್​ ಮುಂತಾದ ಇಂಗ್ಲಿಷ್ ಸಾಹಿತಿಗಳ ಕಾವ್ಯಗಳನ್ನು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.