ADVERTISEMENT

ಸರ್ಕಾರ ರೈತರಿಗೆ ಅನ್ಯಾಯ ಮಾಡುವುದಿಲ್ಲ: ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 7:33 IST
Last Updated 8 ಡಿಸೆಂಬರ್ 2020, 7:33 IST
ವಿಧಾನಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ
ವಿಧಾನಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಯಾವುದೇ ರೀತಿಯಲ್ಲೂ ರೈತರಿಗೆ ಅನ್ಯಾಯ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಪ್ರಶ್ನೆ ಮತ್ತು ಆತಂಕಕ್ಕೆ ಪ್ರತಿಕ್ರಿಯಿಸಿದ ಅವರು, 'ರೈತರಿಗೆ ಅನ್ಯಾಯ ಮಾಡಲು ನಾನಾಗಲೀ, ಪ್ರಧಾನಿ ನರೇಂದ್ರ ಮೋದಿ ಅವರಾಗಲೀ ಸಿದ್ಧರಿಲ್ಲ. ಸದುದ್ದೇಶದಿಂದಲೇ ಕಾಯ್ದೆಗಳ ತಿದ್ದುಪಡಿ ಮಾಡುತ್ತಿದ್ದೇವೆ' ಎಂದರು.

ಕೃಷಿ ಜಮೀನನ್ನು ಕೃಷಿಯೇತರ ಕುಟುಂಬದ ಸದಸ್ಯರು ಖರೀದಿಸಬಾರದು ಎಂಬ ನಿರ್ಬಂಧ ದೇಶದ ಹೆಚ್ಚಿನ ರಾಜ್ಯಗಳಲ್ಲಿ ಇಲ್ಲ.‌ ನೆರೆಯ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಲ್ಲೂ ಇಲ್ಲ. ಕರ್ನಾಟಕದಲ್ಲಿ ಮಾತ್ರ ಇದೆ ಎಂದು ಸ್ಪಷ್ಟನೆ ನೀಡಿದರು.

ADVERTISEMENT

ನೀರಾವರಿ ಜಮೀನು ಬಳಕೆಗೆ ನಿರ್ಬಂಧ ವಿಧಿಸಿ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ‌ . ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ ಮತ್ತು ಸೆಕ್ಷನ್ 79 ಬಿ ರದ್ದು ಮಾಡುವ ಪ್ರಸ್ತಾವದ ಹಿಂದೆ ಯಾವುದೇ ದುರುದ್ದೇಶ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.