ADVERTISEMENT

ಅತ್ಯಾಚಾರಿಗಳ ವಿರುದ್ಧ ‘ಆಂಧ್ರ ಮಾದರಿ’ ಕ್ರಮಕ್ಕೆ ಕುಮಾರಸ್ವಾಮಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 9:32 IST
Last Updated 27 ಆಗಸ್ಟ್ 2021, 9:32 IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ   

ರಾಮನಗರ: ಎಲ್ಲಿಯವರೆಗೂ ಸರ್ಕಾರ, ಪೊಲೀಸ್ ಇಲಾಖೆಯು ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲವೋ ಅಲ್ಲಿಯವರೆಗೂ ಮೈಸೂರಿನಲ್ಲಿ ನಡೆದಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ‘ಆಂಧ್ರಪ್ರದೇಶದಲ್ಲಿ ಈಚೆಗೆ ಅತ್ಯಾಚಾರಿಗಳ ವಿರುದ್ಧ ಅಲ್ಲಿನ ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಂಡಿತು ಎಂಬುದು ನಮ್ಮೆಲ್ಲರಿಗೂ ಗೊತ್ತಿದೆ. ನಮ್ಮ ರಾಜ್ಯದಲ್ಲೂ ಸರ್ಕಾರ ಅಂತಹ ಕಠಿಣ ಕ್ರಮಕ್ಕೆ ಮುಂದಾಗಬೇಕು. ದುಷ್ಟರನ್ನು ಕುಡಿಯಲ್ಲಿಯೇ ಚಿವುಟಿ ಹಾಕುವ ಕೆಲಸ ಆಗಬೇಕು’ ಎಂದು ಅವರು ಅಭಿಪ್ರಾಯಪಟ್ಟರು.

ಅತ್ಯಾಚಾರ ಪ್ರಕರಣ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿ ‘ಅವರು ಆ ರೀತಿ ಯಾಕೆ ಹೇಳಿದರೋ ಗೊತ್ತಿಲ್ಲ. ಗೃಹ ಸಚಿವರಾದ ಆರಂಭದಲ್ಲಿಯೇ ‘ಇದರಿಂದ ನಿದ್ದೆಗೆಟ್ಟಿದ್ದೇನೆ’ ಎಂಬ ಆತಂಕದ ಮಾತುಗಳನ್ನಾಡಿದ್ದರು. ಗೃಹ ಇಲಾಖೆ ಸೂಕ್ಷ್ಮ ಇಲಾಖೆ. ಉತ್ತಮವಾಗಿ ಕೆಲಸ ಮಾಡದೇ ಇದ್ದರೆ ಕಾನೂನು ಬಾಹಿರ ಚಟುವಟಿಕೆಗಳ ನಿರ್ವಹಣೆ ಕಷ್ಟ’ ಎಂದರು.

ADVERTISEMENT

ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ ಕೃತ್ಯ ನಡೆಯಬಾರದಿತ್ತು. ಇಲ್ಲಿ ಸರ್ಕಾರದ ವೈಫಲ್ಯ ಇದೆ. ಈಚಿನ ದಿನಗಳಲ್ಲಿ ಪೊಲೀಸ್ ಇಲಾಖೆ ಕೆಲಸದಲ್ಲಿ ಎಡವುತ್ತಿದ್ದು, ಕೇವಲ ಅಮಾಯಕರ ಮೇಲೆ ಮಾತ್ರ ದಬ್ಬಾಳಿಕೆ ನಡೆಯುತ್ತಿದೆ. ನಿರ್ಜನ ಪ್ರದೇಶಗಳಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿದ್ದೇ ತಪ್ಪು. ನಗರ ಪ್ರದೇಶ, ಹಳ್ಳಿಗಳಲ್ಲಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಎಲ್ಲಿಯವರೆಗೆ ಸರ್ಕಾರ ಹಣ ವಸೂಲಿ ಮಾಡಿ ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತದೆಯೋ ಅಲ್ಲಿಯವರೆಗೂ ಇಲಾಖೆಯಲ್ಲಿನ ನಿಷ್ಕ್ರಿಯತೆಯನ್ನು ತಪ್ಪಿಸಲು ಆಗದು. ಸಾರ್ವಜನಿಕವಾಗಿ ಮದ್ಯಪಾನ, ಅನೈತಿಕ ಚಟುವಟಿಕೆಗಳಿಗೆ ಮೊದಲು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಇವನ್ನೂ ಓದಿ
*

*
*ಆಳ-ಅಗಲ: 5 ವರ್ಷಗಳಲ್ಲಿ 1.76 ಲಕ್ಷ ಅತ್ಯಾಚಾರ ಪ್ರಕರಣ ​
*ತೆಲಂಗಾಣದ ಪಶುವೈದ್ಯೆ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳ ಎನ್‌ಕೌಂಟರ್
​*ಪಶುವೈದ್ಯೆ ಅತ್ಯಾಚಾರ| ಕನ್ನಡಿಗ ವಿಶ್ವನಾಥ್‌ ಸಜ್ಜನರಿಂದ ಎನ್‌ಕೌಂಟರ್‌ ​
*ಪಶು ವೈದ್ಯೆ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಕೊಲೆ: ವ್ಯಾಪಕ ಆಕ್ರೋಶ
*ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ: ನಾಲ್ವರು ಆರೋಪಿಗಳ ಬಂಧನ
*ಪಶು ವೈದ್ಯೆ ಅತ್ಯಾಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮುಗಿಬಿದ್ದ ಟ್ವೀಟಿಗರು
*ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಹಿಂದಿನ ಭೀಕರತೆ ತೆರೆದಿಟ್ಟ ಪೊಲೀಸ್‌ ದಾಖಲೆ
*ಪಶುವೈದ್ಯೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೆಸಿಆರ್‌ ಸೂಚನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.