ADVERTISEMENT

ಸಿಡಿಲು, ಗೋಡೆ ಕುಸಿದು ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 26 ಮೇ 2019, 20:01 IST
Last Updated 26 ಮೇ 2019, 20:01 IST

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಶನಿವಾರ ರಾತ್ರಿ ಮತ್ತು ಭಾನುವಾರ ಸುರಿದ ಮಳೆ ಹಾಗೂ ಸಿಡಿಲಿಗೆ ಒಟ್ಟು ನಾಲ್ವರು ಬಲಿಯಾಗಿದ್ದಾರೆ. ಮೂವರು ಸಿಡಿಲು ಬಡಿದು, ಇನ್ನೊಬ್ಬರು ಗೋಡೆ ಕುಸಿದು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಗಂಗಾಪುರ ಗ್ರಾಮದ ಕೃಷ್ಣಪ್ಪ ಹಳೇಗೌಡರ (48) ಸಿಡಿಲಿಗೆ ಬಲಿಯಾಗಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಅರೆಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ರೈತ ವಿರೂಪಾಕ್ಷಪ್ಪ (45) ಮೃತಪಟ್ಟಿದ್ದಾರೆ.

ADVERTISEMENT

ಹಿರಿಯೂರು ತಾಲ್ಲೂಕು ಆದಿವಾಲ ಗೊಲ್ಲರಹಟ್ಟಿಯ ಆನಂದ್‌ (38) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಲವೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಾದ್ಯಂತ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿತ್ತು.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡಗುಳಿ ಗ್ರಾಮದ ವ್ಯಕ್ತಿಯೊಬ್ಬರು ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಪರಿಚಿತರೊಬ್ಬರ ಮನೆಗೆ ಹೋಗಿದ್ದಾಗ ಭಾನುವಾರ ಬೆಳಿಗ್ಗೆ ದುರ್ಘಟನೆ ನಡೆದಿದೆ. ಕೋಡಿಹಳ್ಳಿ ಹೋಬಳಿ ದೊಡ್ಡಗುಳಿ ಗ್ರಾಮದ ಕೆಂಚೇಗೌಡರ ಮಗ ಕೆಂಪೇಗೌಡ (62) ಮೃತ ವ್ಯಕ್ತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.