
ಪ್ರಜಾವಾಣಿ ವಾರ್ತೆಒಂದೆಡೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನುಗ್ಗಿದ ಬಿಜೆಪಿ ಕಾರ್ಯಕರ್ತರು, ಇನ್ನೊಂದೆಡೆ ಸೌಧದ ಸಂಪರ್ಕ ರಸ್ತೆಯನ್ನೇ ಬಂದ್ ಮಾಡಿದ ರೈತರು. ಎರಡೂ ಹೋರಾಟಗಳಿಂದಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನಕ್ಕೆ ಮಂಗಳವಾರ ಪ್ರತಿಭಟನೆಯ ಬಿಸಿ ತಟ್ಟಿತು. ಮೆಕ್ಕೆಜೋಳ ಖರೀದಿ ಕೇಂದ್ರ ತೆಗೆಯಬೇಕು, ಕಬ್ಬು ಬೆಳೆಗಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಬೃಹತ್ ಹೋರಾಟ ಮಾಡಿದರು. ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ‘ಎಂಎಸ್‌ಪಿ ನೀಡುವುದು ಕೇಂದ್ರ ಸರ್ಕಾರದ ಕೆಲಸ. ಅದಾನಿಯ ಸಾಲ ಮನ್ನಾ ಮಾಡುವ ಕೇಂದ್ರ ಬಿಜೆಪಿ ಸರ್ಕಾರ, ರೈತರ ಸಾಲ ಮನ್ನಾ ಮಾಡಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.