ADVERTISEMENT

ರೈತರ ಹೋರಾಟ ಪ್ರತಿಷ್ಠೆ ಆಗಬಾರದು: ಎಚ್‌.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 5:55 IST
Last Updated 10 ಫೆಬ್ರುವರಿ 2021, 5:55 IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ   

ರಾಯಚೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ದೇವದುರ್ಗದಲ್ಲಿ ಆಯೋಜಿಸಿರುವ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುವ ಪೂರ್ವ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

'ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ಚಳಿಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ' ಎಂದರು.

ADVERTISEMENT

'ಗಣರಾಜ್ಯೋತ್ಸವ ದಿನದಂದು ನಡೆದ ಗಲಭೆಗೆ ಯಾರು ಕಾರಣ ಎಂಬುದು ತನಿಖೆ ನಡೆದಿದೆ. ಖಲಿಸ್ತಾನ, ವಿದೇಶಿ ಹಣ ಬಂದಿತ್ತು ಎನ್ನುವ ಊಹಾಪೋಹಕ್ಕೆ‌ ನಾನು ಉತ್ತರ ಕೊಡುವುದಿಲ್ಲ. ಗೃಹ ಸಚಿವಾಲಯ ಈ ಬಗ್ಗೆ ತನಿಖೆ ಮಾಡುತ್ತಿದ್ದು, ಅದರ ವರದಿ ಆಧರಿಸಿ ಮತ್ತೆ ಮಾತನಾಡುತ್ತೇನೆ' ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಕುರಿತು ಮಾತನಾಡಿ, 'ಈ‌ ಬಗ್ಗೆ‌ ಸಿದ್ದರಾಮಯ್ಯ ಅವರಿಗೆ ಉತ್ತಮ ಮಾಹಿತಿ ಇದೆ. ಅವರೇ ಮಾತನಾಡುತ್ತಾರೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.