ADVERTISEMENT

ಬೆಳೆ ಸಾಲ ಮನ್ನಾ ₹876 ಕೋಟಿ ಬಿಡುಗಡೆ: 10 ಲಕ್ಷ ರೈತರು ಸೌಲಭ್ಯಕ್ಕೆ ಅರ್ಹ

​ಪ್ರಜಾವಾಣಿ ವಾರ್ತೆ
Published 14 ಜನವರಿ 2019, 20:25 IST
Last Updated 14 ಜನವರಿ 2019, 20:25 IST
   

ಬೆಂಗಳೂರು: ರಾಜ್ಯದ ಸಹಕಾರಿ ಬ್ಯಾಂಕುಗಳಲ್ಲಿ ಬೆಳೆ ಸಾಲ ಹೊಂದಿರುವ 1.10 ಲಕ್ಷ ರೈತರ ಖಾತೆಗಳಿಗೆ ಜನವರಿ 11ರ ವರೆಗೆ ₹616 ಕೋಟಿ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 58 ಸಾವಿರ ಸಾಲಖಾತೆಗಳಿಗೆ ₹260 ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 1.7 ಲಕ್ಷ ಖಾತೆಗಳಿಗೆ ₹876 ಕೋಟಿ ಮೊತ್ತ ಬಿಡುಗಡೆ ಮಾಡಿದಂತಾಗಿದೆ ಎಂದಿದ್ದಾರೆ.

ಜನವರಿ 10ರ ವರೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳ 4.49 ಲಕ್ಷ ಹಾಗೂ ಸಹಕಾರಿ ಬ್ಯಾಂಕ್‌ಗಳ 5.84 ಲಕ್ಷ ರೈತರು ಸಾಲ ಮನ್ನಾ ಯೋಜನೆಗಾಗಿ ಅರ್ಹತೆ ಹೊಂದಿದ್ದಾರೆ. ಖಾತೆಗಳಿಗೆ ಮನ್ನಾ ಮೊತ್ತವನ್ನು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಿಯಮಿತವಾಗಿ ಪಾವತಿಸಲಾಗುತ್ತದೆ. ಸಹಕಾರಿ ಬ್ಯಾಂಕುಗಳಲ್ಲಿ ಸಾಲವನ್ನು ತೀರಿಸುವ ವಾಯಿದೆ ಮುಗಿದ ನಂತರ ಮನ್ನಾ ಮೊತ್ತ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.