ADVERTISEMENT

ಸಾಲಮನ್ನಾದ ಗುಂಗಿನಲ್ಲಿ ಎಚ್‌ಡಿಕೆ: ಬಿಎಸ್‌ವೈ ಲೇವಡಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 18:18 IST
Last Updated 1 ಸೆಪ್ಟೆಂಬರ್ 2018, 18:18 IST
ಯಡಿಯೂರಪ್ಪ
ಯಡಿಯೂರಪ್ಪ   

ಸಿಂದಗಿ (ವಿಜಯಪುರ ಜಿಲ್ಲೆ): ‘ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಾಲ ಮನ್ನಾದ ಸೋಗು ಹಾಕಿಕೊಂಡು ತಿರುಗುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಲೇವಡಿ ಮಾಡಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಅವರವರೇ ಕಚ್ಚಾಡಿಕೊಂಡು ಸರ್ಕಾರ ಬೀಳಿಸುತ್ತಾರೆ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಮುಖಂಡರ ವಿರುದ್ಧ ರಾಹುಲ್‌ ಗಾಂಧಿಗೆ ದೂರು ನೀಡುತ್ತಿದ್ದಾರೆ; ರಾಜ್ಯ ಸರ್ಕಾರದ ಬಗ್ಗೆ ಜನ ಹಿಡಿಶಾಪ ಹಾಕುತ್ತಿದ್ದಾರೆ’ ಎಂದರು.

‘ಉತ್ತರ ಕರ್ನಾಟಕದಲ್ಲಿ ಭೀಕರ ಬರವಿದ್ದರೂ ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಹಾಸನ ಸೇರಿದಂತೆ ಮೂರು ಜಿಲ್ಲೆಗಳಿಗೆ ಸರ್ಕಾರ ಸೀಮಿತವಾಗಿದೆ. ಸಚಿವರು ಇದ್ದಾರೋ ಸತ್ತಿದ್ದಾರೋ ತಿಳಿಯುತ್ತಿಲ್ಲ’ ಎಂದು ಕಿಡಿಕಾರಿದ ಅವರು, ರಾಜ್ಯ ಸರ್ಕಾರ ಮತ್ತು ಸಮನ್ವಯ ಸಮಿತಿ ಎರಡೂ ಸತ್ತು ಹೋಗಿವೆ ಎಂದು ಕುಟುಕಿದರು.

ADVERTISEMENT

‘ನಾನು ಮೊದಲಿಂದಲೂ ದೈವಭಕ್ತ. ಕುಮಾರಸ್ವಾಮಿ, ಈಗ ಟೆಂಪಲ್ ರನ್ ಯಾಕೆ ಮಾಡುತ್ತಿದ್ದಾರೆ ಎಂಬುವುದು ಅವರನ್ನೇ ಕೇಳಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.