ADVERTISEMENT

ಕೃಷಿ ಕಾಯ್ದೆಗೆ ವಿರೋಧ: ಡಿ.16 ರಿಂದ ಬೆಂಗಳೂರಿನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 19:31 IST
Last Updated 13 ಡಿಸೆಂಬರ್ 2020, 19:31 IST
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ   

ಮೈಸೂರು: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಡಿ.16 ರಿಂದ 31ರವರೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳು ಸಂಯುಕ್ತವಾಗಿ ಪ್ರತಿಭಟನೆ ನಡೆಸಲಿವೆ. ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ನಡೆಯುವ ಧರಣಿಯಲ್ಲಿ ಮೊದಲ ದಿನ ಎಲ್ಲ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

24 ರಂದು ನವದೆಹಲಿಗೆ: ‘ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ’ ಸಮಿತಿ ವತಿಯಿಂದ 25 ಮಂದಿಯ ನಿಯೋಗ ನವದೆಹಲಿಗೆ ತೆರಳಿ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದೆ. ನಿಯೋಗವು ಡಿ.24 ರಂದು ದೆಹಲಿಗೆ ತೆರಳಲಿದ್ದು, 25 ಮತ್ತು 26 ರಂದು ಪ್ರತಿಭಟನೆಯಲ್ಲಿ ಭಾಗವಹಿಸಲಿದೆ’ ಎಂದರು.

ADVERTISEMENT

ರೈತರಿಗೆ ಮಾರಕ: ‘ಜನರನ್ನು ಭಾವನಾತ್ಮಕವಾಗಿ ಸೆಳೆಯಲು ಬಿಜೆಪಿ ಸರ್ಕಾರ, ಗೋಹತ್ಯೆ ನಿಷೇಧ ಮಾಡಲು ಮುಂದಾಗಿದೆ. ಗೋಹತ್ಯೆ ನಿಷೇಧ ಮಸೂದೆ ರೈತರಿಗೆ ಮಾರಕವಾಗಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.