ADVERTISEMENT

ರೇಷ್ಮೆಗೂಡು ರಸ್ತೆಗೆ ಸುರಿದು ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2018, 5:36 IST
Last Updated 13 ಜುಲೈ 2018, 5:36 IST
   

ರಾಮನಗರ: ರೇಷ್ಮೆಗೂಡು ಬೆಲೆ ಕುಸಿತ ಖಂಡಿಸಿ ಹಾಗೂ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ರೈತರು ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆ ಎದುರು ಶುಕ್ರವಾರ ಬೆಳಿಗ್ಗೆ ದಿಢೀರ್ ಪ್ರತಿಭಟನೆ ನಡೆಸಿದರು.

ಬೆಂಗಳೂರು-ಮೈಸೂರು ಹೆದ್ದಾರಿಗೆ ಗೂಡು ಸುರಿದ ಪ್ರತಿಭಟನಾಕಾರರು, ವಾಹನಗಳ ಸಂಚಾರಕ್ಕೆ ತಡೆ ಒಡ್ಡಿದರು. ಇಲಾಖೆಯ ಆಯುಕ್ತರು ಸ್ಥಳಕ್ಕೆ ಬಂದು ರೈತರ ಸಮಸ್ಯೆ ಆಲಿಸುವಂತೆ ಆಗ್ರಹಿಸಿದರು.

ಕಳೆದ ಮೂರು ತಿಂಗಳಿನಿಂದ ಗೂಡಿನ ಬೆಲೆ ಕುಸಿಯುತ್ತಿದ್ದರೂ ಅಧಿಕಾರಿಗಳು ಕ್ರಮ ವಹಿಸಿಲ್ಲ. ಸದ್ಯ ಪ್ರತಿ ಕೆ.ಜಿ.ಗೆ 150ಕ್ಕೆ ಗೂಡು ಮಾರಾಟವಾಗುತ್ತಿದ್ದು, ನಷ್ಟ ಅನುಭವಿಸುವಂತೆ ಆಗಿದೆ ಎಂದು ದೂರಿದರು.

ADVERTISEMENT

ಪ್ರತಿ ಕೆ.ಜಿ. ಗೂಡಿಗೆ (ಸಿ.ಬಿ. ತಳಿ) ಕನಿಷ್ಠ 350 ರೂಪಾಯಿ ಹಾಗೂ ಬೈವೋಲ್ಟಿನ್‌ಗೆ 450 ರೂಪಾಯಿ ಬೆಂಬಲ ಬೆಲೆ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಿಂದಾಗಿ ಗೂಡು ಹರಾಜು ಪ್ರಕ್ರಿಯೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.