
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಬೆಳಗಾವಿ: ‘ಕಾಂಗ್ರೆಸ್ಸಿಗರು ಯಾವತ್ತೂ ಕರ್ನಾಟಕದ ಪರವಾಗಿ ಕೆಲಸ ಮಾಡಿಲ್ಲ. ನಿಜವಾಗಿ ಕೆಲಸ ಮಾಡಿದ್ದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಗ್ಯಾರಂಟಿ ಯೋಜನೆಗಳನ್ನು ಏಕೆ ಜಾರಿಗೆ ತರಲಾಯಿತು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.
ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ನಾಯಕತ್ವ ಜಟಾಪಟಿ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿ ಸಮಾಲೋಚಿಸಿದರು. ಈ ಮೂಲಕ, ತಮ್ಮ ಕನಸು ಸಾಕಾರಗೊಳಿಸಿಕೊಳ್ಳುವ ಯತ್ನ ಮುಂದುವರಿಸಿದರು.
ನವದೆಹಲಿ: ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದಾಗಿ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗಿದೆ ಎಂದು ಎಐಎಂಐಎಂನ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಅಪ್ರಕಟಿತ ಪುಸ್ತಕ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಸೋರಿಕೆ ಕುರಿತಂತೆ ದೆಹಲಿ ಪೊಲೀಸರ ವಿಶೇಷ ವಿಭಾಗ ಬಹು ರಾಷ್ಟ್ರೀಯ ತನಿಖೆ ತೀವ್ರಗೊಳಿಸಿದ್ದು, ಮಹತ್ವದ ಮಾಹಿತಿ ಕಲೆ ಹಾಕಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ನವದೆಹಲಿ: ಭಾರತ ತಂಡವು ಗುರುವಾರದ ಪಂದ್ಯದಲ್ಲಿ ನಮಿಬಿಯಾ ವಿರುದ್ಧ ಆಡಲಿದೆ. ಆದರೆ ಸೂರ್ಯ ಕುಮಾರ್ ಯಾದವ್ ಬಳಗಕ್ಕೆ ನಮಿಬಿಯಾ ತಂಡದ ಬಗ್ಗೆ ಆತಂಕವಿಲ್ಲ. ಆದರೆ ಅಭಿಷೇಕ್ ಶರ್ಮಾ ಅವರ ಹೊಟ್ಟೆನೋವು ಇಡೀ ತಂಡದಲ್ಲಿ ಆತಂಕ ತರಿಸಿದೆ.
ದಾವಣಗೆರೆ: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇರೆಗೆ ‘ಬೆಸ್ಕಾಂ’ ಸಿವಿಲ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಚ್. ಅರ್ಜುನ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.
ವಾಷಿಂಗ್ಟನ್: ಭಾರತದ ಜೊತೆಗಿನ ವ್ಯಾಪಾರ ಒಪ್ಪಂದವನ್ನು ‘ಐತಿಹಾಸಿಕ’ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕ ಮತ್ತು ಅದರೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಹೊಂದಿರುವ ಇತರ ದೇಶಗಳಿಗೆ ಕಲ್ಲಿದ್ದಲು ರಫ್ತು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದು ಅವರು ಹೇಳಿದ್ದಾರೆ.
ಕಾನ್ಪುರ: ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಅಪಘಾತ ಪ್ರಕರಣ ಸಂಬಂಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಾಷಿಂಗ್ಟನ್: ಅಮೆರಿಕವು ವಿಶ್ವದ ನಂಬರ್ ಒನ್ ಇಂಧನ ಉತ್ಪಾದಕ ರಾಷ್ಟ್ರವಾಗಿದ್ದು, ಬೃಹತ್ ಇಂಧನ ರಫ್ತುದಾರ ರಾಷ್ಟ್ರವಾಗುವತ್ತ ದಾಪುಗಾಲಿಟ್ಟಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಹಾಸನ: ಪ್ರೀತಂ ಗೌಡ ಮೈತ್ರಿಯ ಬಗ್ಗೆ ಅಪಸ್ವರ ಎತ್ತದಿರಲಿ. ಹೈಕಮಾಂಡ್ ನಿರ್ದೇಶನದಂತೆ ಮೈತ್ರಿ ನಡೆಯಲಿದ್ದು, ಲಂಗು ಲಗಾಮು ಇಲ್ಲದೇ ಮಾತನಾಡುವುದನ್ನು ನಿಲ್ಲಿಸಲಿ. ಮೈತ್ರಿಗೆ ಗೌರವ ಕೊಡಲಿ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.