ADVERTISEMENT

06 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 16:01 IST
Last Updated 6 ಫೆಬ್ರುವರಿ 2026, 16:01 IST
<div class="paragraphs"><p>ಮುಖ 10 ಸುದ್ದಿಗಳು</p></div>

ಮುಖ 10 ಸುದ್ದಿಗಳು

   

ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.

ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರವೂ ಕೂಡ ತೀವ್ರ ಪ್ರತಿಭಟನೆ ನಡೆಸಿದೆ. ಇದರಿಂದ ಅಸಮಾಧಾನಗೊಂಡ ಸ್ವೀಕರ್‌ ಓಂ ಬಿರ್ಲಾ, ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ADVERTISEMENT

Under-19 WC: ದಾಖಲೆಯ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಯುವಪಡೆ

ಹರಾರೆ: 19 ವರ್ಷದೊಳಗಿನವರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಅನ್ನು ಭಾರತ ಯುವಪಡೆ 100 ರನ್‌ಗಳಿಂದ ಗೆಲ್ಲುವ ಮೂಲಕ 6ನೇ ಭಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.

ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ನಾಯಕತ್ವ ಬದಲಾವಣೆ ಮಾಡುವುದಿಲ್ಲವೆಂದು ಹೈಕಮಾಂಡ್‌ ಕೂಡ ಹೇಳಿದೆ. ಬೇರೆಯವರ ಬೇಡಿಕೆಗೆ ಮನ್ನಣೆಯನ್ನು ಕೊಟ್ಟಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ

ಡಿಕೆಶಿ

ಮಂಗಳೂರು: ‘ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಇನ್ನೇನಿದೆ. ಅವರ ಮಾತನ್ನು ಗೌರವದಿಂದ ಸ್ವೀಕರಿಸುವೆ’ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಸಚಿವೆ ಲಕ್ಷ್ಮೀ ಬೌಲಿಂಗ್‌ಗೆ ಸಚಿವ ಸತೀಶ ಬೋಲ್ಡ್‌!

ಶ್ರೀನಗರದಲ್ಲಿ ನಿರ್ಮಿಸಿದ ಬಾಲಭವನದಲ್ಲಿ ಬಾಕ್ಸ್ ಕ್ರಿಕೆಟ್‌ ಮೈದಾನವನ್ನು ಸಚಿವ ಸತೀಶ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು. ಈ ವೇಳೆ ಸಚಿವೆ ಲಕ್ಷ್ಮೀ ಬೌಲಿಂಗ್‌ ಮಾಡಿದರು. ನಾಲ್ಕು ಬೌಲ್‌ಗಳನ್ನು ಟಚ್ ಮಾಡಿದ ಸಚಿವ ಸತೀಶ ಐದನೇ ಬೌಲಿಗೆ ಬೋಲ್ಡ್‌ ಆದರು.

ಟಿ20 ವಿಶ್ವಕಪ್ ತಂಡದಿಂದ ಹರ್ಷಿತ್ ರಾಣಾ ಹೊರಕ್ಕೆ: ಘಾತಕ ವೇಗಿಗೆ ಅವಕಾಶ

ಮೊಹಮ್ಮದ್ ಸಿರಾಜ್ 

ಮುಂಬೈ: ವಿಶ್ವಕಪ್ ಆರಂಭಕ್ಕೆ ಒಂದು ದಿನ ಮಾತ್ರ ಬಾಕಿ ಉಳಿದಿದ್ದು, ಭಾರತ ತಂಡದ ವೇಗಿ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬದಲಿಗೆ ಇನ್ನೋರ್ವ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡಲಾಗಿದೆ.

ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಗರಂ: ಕೇಂದ್ರದತ್ತ ಬೊಟ್ಟು

ಬೆಂಗಳೂರು: ಬೆಂಗಳೂರು ಮೆಟ್ರೊ ಪ್ರಯಾಣ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಿಸಿದ್ದಾರೆ.

ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

15 ಬೌಂಡರಿ, 15 ಸಿಕ್ಸರ್: ಆಂಗ್ಲರ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ

ಹರಾರೆ: 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡದ ತಾರೆ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಅವರು ಅಂಡರ್19 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಅತೀ ವೇಗದ ಶತಕ ಸಿಡಿಸಿದ ದಾಖಲೆ ಬರೆದರು.

ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ಮೋದಿಗಿಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: ‘ತಮಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ವಾಗ್ದಾಳಿ ನಡೆಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.