
ಪ್ರಜಾವಾಣಿ ವಾರ್ತೆ‘ಒಕ್ಕೂಟ ವ್ಯವಸ್ಥೆ ಮತ್ತು ಸಂಪನ್ಮೂಲಹಂಚಿಕೆ - ಆಗುತ್ತಿರುವುದೇನು?’ ಎಂಬ ವಿಷಯದ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಸಮೂಹ ಸಂಸ್ಥೆಯ ಸಹಯೋಗದಲ್ಲಿ ದಾವಣಗೆರೆಯಲ್ಲಿ ಸಂವಾದ ನಡೆಯಿತು. ‘ಸಂವಿಧಾನವೇ ಬೆಳಕು– ಒಂದು ಚರ್ಚೆ’ ವಿಷಯದ ಭಾಗವಾಗಿ ನಡೆದ ಸಂವಾದದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಕರೆಣ್ಣವರ, ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ, ದಾವಣಗೆರೆ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕಕುಮಾರ್ ಪಾಳೇದ ಹಾಗೂ ಸಾಮಾಜಿಕ ಕಾರ್ಯಕರ್ತ ಬಿ.ಎಂ. ನಿರಂಜನ್ ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರಮುಖರು. ‘ಪ್ರಜಾವಾಣಿ’ ದಾವಣಗೆರೆ ಬ್ಯೂರೊ ಮುಖ್ಯಸ್ಥ ಸಿದ್ದಯ್ಯ ಹಿರೇಮಠ ಸಂವಾದದ ಸಂವಹನಕಾರರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.