ADVERTISEMENT

ರಾಜ್ಯದಲ್ಲಿ ಪದವಿ ಕಾಲೇಜುಗಳ ಶುಲ್ಕ ಶೇ.10ರಷ್ಟು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 11:18 IST
Last Updated 3 ಜನವರಿ 2024, 11:18 IST
<div class="paragraphs"><p>ಹಣ ಸಂಗ್ರಹ ಚಿತ್ರ</p></div>

ಹಣ ಸಂಗ್ರಹ ಚಿತ್ರ

   

ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ 10ರಷ್ಟು ಹೆಚ್ಚಳ ಮಾಡಲಾಗಿದೆ.

ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಪ್ರಸ್ತಾವಕ್ಕೆ ಉನ್ನತ ಶಿಕ್ಷಣ ಇಲಾಖೆ ಸಮ್ಮತಿ ನೀಡಿದೆ. ಕೋವಿಡ್‌ ಆರಂಭಕ್ಕೂ ಮೊದಲು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವವನ್ನು ಸರ್ಕಾರ ತಡೆ ಹಿಡಿದಿತ್ತು. ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಎಲ್ಲ ವಿಶ್ವವಿದ್ಯಾಲಯಗಳೂ ಮರುಪ್ರಸ್ತಾವ ಸಲ್ಲಿಸಿದ್ದವು.

ADVERTISEMENT

ವಿವಿಧ ವಿಷಯಗಳ ಪ್ರವೇಶಕ್ಕೆ ಇದುವರೆಗೂ ಇದ್ದ ಶುಲ್ಕವನ್ನು ಶೇ 10ರಷ್ಟು ಹೆಚ್ಚಳ ಮಾಡಲು ಸಮ್ಮತಿ ದೊರೆತಿರುವುದರಿಂದ ಬಿ.ಎ, ಬಿ.ಕಾಂ, ಬಿ.ಎಸ್‌ಸಿ ಸೇರಿದಂತೆ ಪದವಿ ಪ್ರವೇಶ ದುಬಾರಿಯಾಗಲಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.