ಸಿದ್ದರಾಮಯ್ಯ
ಬೆಂಗಳೂರು: ‘ರಸಗೊಬ್ಬರ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರ ಜೊತೆ ನಡೆಸುತ್ತಿದ್ದ ಸಭೆಯ ಮಧ್ಯೆ ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.
‘ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿದೆ. ಕೇಂದ್ರದ ಅಸಹಕಾರದ ನಡುವೆಯೂ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ, ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ, ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಯತ್ನಿಸುವ ಸಾಧ್ಯತೆಯಿದೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದ್ದಾರೆ.
‘ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿ ಆಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಮೇಲೆ ಕಣ್ಣಿಡಬೇಕು’ ಎಂದೂ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.