ADVERTISEMENT

ಹೆಣ್ಣುಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2023, 15:51 IST
Last Updated 30 ನವೆಂಬರ್ 2023, 15:51 IST
ಭ್ರೂಣ ( ಸಾಂಕೇತಿಕ ಚಿತ್ರ)
ಭ್ರೂಣ ( ಸಾಂಕೇತಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಜತೆಗೆ ಗುರುವಾರ ರಾತ್ರಿ ದೂರವಾಣಿ ಮೂಲಕ ಚರ್ಚಿಸಿ, ಸಿಐಡಿ ತನಿಖೆ ನಡೆಸುವಂತೆ ಸೂಚಿಸಿದ್ಧಾರೆ.

ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಕಡೆ ಹೆಣ್ಣುಭ್ರೂಣ ಹತ್ಯೆ ಪ್ರಕರಣ ನಡೆದಿದ್ದು, ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಇದುವರೆಗೂ 9 ಮಂದಿಯನ್ನು ಬಂಧಿಸಿದ್ದಾರೆ.

ADVERTISEMENT

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ನಡೆಸಿರುವುದು ಪೊಲೀಸ್‌ ತನಿಖೆಯಿಂದ ಬಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.