ADVERTISEMENT

ರಾತ್ರಿ ಕರ್ಫ್ಯೂ ನಿರ್ಧಾರ ವಾಪಸ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಒಂದೇ ದಿನದಲ್ಲಿ ಆದೇಶ ಹಿಂಪಡೆದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 13:05 IST
Last Updated 24 ಡಿಸೆಂಬರ್ 2020, 13:05 IST
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ರೂಪಾಂತರ ಹೊಂದಿರುವಕೊರೊನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದಿನಿಂದ ಜ.2ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸುವ ನಿರ್ಧಾರವನ್ನುರಾಜ್ಯ ಸರ್ಕಾರ ವಾಪಸು ಪಡೆದಿದೆ.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ವಿರೋಧಗಳು ವ್ಯಕ್ತವಾಗಿದ್ದವು. ಹೀಗಾಗಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾತ್ರಿ ಕರ್ಫ್ಯೂ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

‘ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಳ್ಳಬೇಕು.ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಬೇಕು.ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು’ ಎಂದೂ ಅವರು ಮನವಿ ಮಾಡಿದ್ದಾರೆ.

‘ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.