ADVERTISEMENT

27 ರಂದು ರಾಯಚೂರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 15:57 IST
Last Updated 15 ಆಗಸ್ಟ್ 2022, 15:57 IST
ಶಂಕರ ಪಾಟೀಲ
ಶಂಕರ ಪಾಟೀಲ   

ರಾಯಚೂರು: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಆಗಸ್ಟ್‌ 27 ರಂದು ಬರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಏಮ್ಸ್‌ ಬೇಡಿಕೆ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ. ವಿಮಾನ ನಿಲ್ದಾಣ ನಿರ್ಮಾಣದಲ್ಲಿರುವ ತಾಂತ್ರಿಕ ಅಡಚಣೆಗಳನ್ನು ಪರಿಹರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಏಮ್ಸ್‌ಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಈ ಹಿಂದೆ ಭೇಟಿ ನೀಡಿದ್ದೇನೆ. ಕೊಟ್ಟಿರುವ ಮಾತಿನ ಪ್ರಕಾರ, ಜಿಲ್ಲೆಗೆ ಮುಖ್ಯಮಂತ್ರಿಯವರು ಬಂದಾಗ ಬೇಡಿಕೆ ಕುರಿತು ಸುದೀರ್ಘವಾಗಿ ಚರ್ಚಿಸಲಾಗುವುದು. ರಾಯಚೂರು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿದ್ದು, ಕೇಂದ್ರದಿಂದ ಸಾಕಷ್ಟು ಅನುದಾನ ಹರಿದು ಬರಲಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಮೂಲಸೌಕರ್ಯಗಳ ಸಮೀಕ್ಷೆ ಮಾಡುವಂತೆ ತಿಳಿಸಲಾಗಿದೆ. ವರದಿ ಸಿದ್ಧಪಡಿಸಿದ ಬಳಿಕ ಅಗತ್ಯ ಅನುದಾನ ಒದಗಿಸಿ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.