ADVERTISEMENT

ವಿದ್ಯುತ್ ಮಗ್ಗಗಳ ಕಾರ್ಮಿಕರಿಗೂ ಪರಿಹಾರ ಧನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 13:10 IST
Last Updated 18 ಜೂನ್ 2020, 13:10 IST

ಬೆಳಗಾವಿ: ಕೋವಿಡ್-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಪರಿಹಾರ ನೀಡಲಾಗುವುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ತಿಳಿಸಿದೆ.

‘ರಿಯಾಯಿತಿ ದರದಲ್ಲಿ ವಿದ್ಯುತ್ ಪಡೆಯುತ್ತಿರುವ ಘಟಕಗಳ ವಿದ್ಯುತ್ ಮಗ್ಗಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಒಂದು ಬಾರಿಗೆ ಅನ್ವಯಿಸುವಂತೆ ₹ 2ಸಾವಿರ ಪರಿಹಾರ ಸಿಗಲಿದೆ. ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು’ ಎಂದು ಮಾಹಿತಿ ನೀಡಲಾಗಿದೆ.

‘ಬೆಳಗಾವಿ ನಗರ ವ್ಯಾಪ್ತಿಯ ಘಟಕಗಳ ಮಾಲೀಕರು ದಾಖಲಾತಿಗಳನ್ನು ವಡಗಾವಿಯ ಸರ್ಕಾರಿ ಶಾಲೆ (ಜೈಲ್ ಶಾಲೆ)ಯಲ್ಲಿ ಸಲ್ಲಿಸಬಹುದು. ನಿಪ್ಪಾಣಿ, ಚಿಕ್ಕೋಡಿ, ಹುಕ್ಕೇರಿ, ರಾಮದುರ್ಗ, ಸವದತ್ತಿ, ರಾಯಬಾಗ, ಕಿತ್ತೂರು, ಬೈಲಹೊಂಗಲ, ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ವಿದ್ಯುತ್ ಮಗ್ಗಗಳ ಮಾಲೀಕರು ಇಲಾಖೆಯಿಂದ ನಿಗದಿಪಡಿಸಿದ ಸ್ಥಳೀಯ ನೇಕಾರ ಸಹಕಾರ ಸಂಘಗಳಿಂದ ಅಥವಾ ಉಪನಿರ್ದೇಶಕರ ಕಚೇರಿಯಿಂದ ಮುಚ್ಚಳಿಕೆ ಪತ್ರ ನಮೂನೆಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ದೂ:0831-2950674 ಸಂಪರ್ಕಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.