ADVERTISEMENT

ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಿದರೆ ದಂಡ: ಚಿಂತನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 21:41 IST
Last Updated 6 ಡಿಸೆಂಬರ್ 2022, 21:41 IST
   

ಬೆಂಗಳೂರು: ಗ್ರಾಮೀಣ ಪ್ರದೇಶ ಗಳ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಪತ್ತೆಯಾದರೆ, ಮಾರಾಟಗಾರರ ವಿರುದ್ಧ ದೊಡ್ಡ ಮೊತ್ತದ ದಂಡ ವಿಧಿಸಲು ಚಿಂತನೆ ನಡೆಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ತಡೆಗೆ ಬಿಗಿ ಕ್ರಮ ತೆಗೆದುಕೊಳ್ಳ
ಲಾಗುವುದು ಎಂದರು.

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ತರುವುದು ಮತ್ತು ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ತಡೆಯಲು ಅಬಕಾರಿ ಡಿಸಿಗಳ ಸಭೆಯನ್ನು ಬುಧವಾರ ನಡೆಸಲಾಗುವುದು. ಕಿರಾಣಿ ಅಂಗಡಿ ಗಳಲ್ಲಿ ಮದ್ಯ ಮಾರಾಟವನ್ನು ತಡೆಯಲು ಹೊಸ ಮದ್ಯದ ಮಳಿಗೆ ಗಳಿಗೆ ಲೈಸೆನ್ಸ್‌ ಕೊಡುವುದು ಅನಿವಾರ್ಯ. ಆದರೆ, ಸದ್ಯದ ಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ ಎಂದು ಹೇಳಿದರು.

ADVERTISEMENT

ಜಯರಾಮ್‌ಗೆ ವರ್ಷದ ಅತ್ಯುತ್ತಮ ಸಿಇಒ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಎನ್‌.ಜಯರಾಮ್‌ ಅವರು ವರ್ಷದ ಅತ್ಯುತ್ತಮ ಸಿಇಒ ಪ್ರಶಸ್ತಿಗೆ
ಭಾಜನರಾಗಿದ್ದಾರೆ.

ಚೆನ್ನೈನಲ್ಲಿ ಇತ್ತೀಚೆಗೆ ನಡೆದ ನ್ಯಾಟ್‌ಕೋಮ್‌ ಕಾರ್ಯಕ್ರಮದಲ್ಲಿ
ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

‘ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮೆಟರಿಯಲ್‌ ಮ್ಯಾನೇಜ್‌ಮೆಂಟ್‌’ ವತಿಯಿಂದ ಈ ಪ್ರಶಸ್ತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.