ADVERTISEMENT

ಕಟ್ಟಡ ನಿರ್ಮಾಣ ನಿಯಮ ಉಲ್ಲಂಘನೆಗೆ ಅವಕಾಶ: ಇನ್ನು ಮುಂದೆ ಅಧಿಕಾರಿಗಳಿಗೂ ದಂಡ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 10:21 IST
Last Updated 10 ಅಕ್ಟೋಬರ್ 2019, 10:21 IST
ಬನಶಂಕರಿ ವ್ಯಾಪ್ತಿಯ ಪುಟ್ಟೇನಹಳ್ಳಿ ಸಿಗ್ನಲ್ ಸಾರಕ್ಕಿ ವೃತ್ತದ ಬಳಿ ಮೂರು ಅಂತಸ್ತಿನ ಕಟ್ಟಡ ಈಚೆಗೆ ಕುಸಿಯಿತು (ಪ್ರಾತಿನಿಧಿಕ ಚಿತ್ರ).
ಬನಶಂಕರಿ ವ್ಯಾಪ್ತಿಯ ಪುಟ್ಟೇನಹಳ್ಳಿ ಸಿಗ್ನಲ್ ಸಾರಕ್ಕಿ ವೃತ್ತದ ಬಳಿ ಮೂರು ಅಂತಸ್ತಿನ ಕಟ್ಟಡ ಈಚೆಗೆ ಕುಸಿಯಿತು (ಪ್ರಾತಿನಿಧಿಕ ಚಿತ್ರ).   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ‌ ನೀಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮಗಳನ್ನು ರೂಪಿಸಲಾಗಿದೆ ಎಂದುರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಕರಡು ಅಧಿಸೂಚನೆಯನ್ನು ವಿಭಾಗೀಯ ನ್ಯಾಯಪೀಠಕ್ಕೆ ನೀಡಿದ ಸರ್ಕಾರದ ಪರ ವಕೀಲರು, ‘ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು 30 ದಿನ ಕಾಲಾವಕಾಶ ನೀಡಲಾಗಿದೆ’ಎಂದು ತಿಳಿಸಿದರು.

ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 18ಕ್ಕೆಮುಂದೂಡಿದೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.