ADVERTISEMENT

CS ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಮಾತು: BJPಯ ರವಿಕುಮಾರ್ ವಿರುದ್ಧ FIR

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 13:23 IST
Last Updated 3 ಜುಲೈ 2025, 13:23 IST
<div class="paragraphs"><p>ಎನ್. ರವಿಕುಮಾರ್</p></div>

ಎನ್. ರವಿಕುಮಾರ್

   

ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಗುರುವಾರ ಎಫ್‌ಐಆರ್ ದಾಖಲಾಗಿದೆ.

ಜೆ.ಪಿ.ನಗರದ ನಿವಾಸಿ, ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಗರ್ತನಾ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಸಂಬಂಧ ಎನ್‌.ರವಿಕುಮಾರ್‌ ಅವರಿಗೆ ನೋಟಿಸ್ ಜಾರಿ ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದರು.

ADVERTISEMENT

‘ಬಿಜೆಪಿಯಿಂದ ಜುಲೈ 1ರಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್‌ ಅವರ ಕುರಿತು ಅಸಂಸದೀಯ ಪದ ಬಳಸಿ ಮಾತನಾಡಿದ್ದಾರೆ. ಅವರ ಹೇಳಿಕೆಯು ಮುಖ್ಯಕಾರ್ಯದರ್ಶಿ ಹುದ್ದೆಗೆ ಅಗೌರವ ತಂದಿದೆ. ಶಾಲಿನಿ ಅವರ ಗೌರವಕ್ಕೆ ಕುಂದುಉಂಟು ಮಾಡಿ ಇಡೀ ಮಹಿಳಾ ಕುಲಕ್ಕೆ ಅಗೌರವ ತೋರಿದಂತೆ ಆಗಿದೆ. ರವಿಕುಮಾರ್‌ ಅವರ ಮಾತು ಲೈಂಗಿಕ ಅರ್ಥ ಛಾಯೆ ಬರುವ ಮಾತಾಗಿದೆ. ಮುಖ್ಯಕಾರ್ಯದರ್ಶಿಯವರ ಖ್ಯಾತಿಗೆ ಹಾನಿ ಉಂಟು ಮಾಡಿದೆ’ ಎಂದು ದೂರು ಆಧರಿಸಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎನ್‌.ಮನೋಹರ್ ಅವರೂ ಎನ್.ರವಿಕುಮಾರ್ ಅವರ ವಿರುದ್ಧ ಬುಧವಾರ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.