ADVERTISEMENT

ಖಾದರ್‌ ವಿರುದ್ಧ ಎಫ್‌ಐಆರ್‌

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 19:56 IST
Last Updated 21 ಡಿಸೆಂಬರ್ 2019, 19:56 IST
ಯು.ಟಿ. ಖಾದರ್‌
ಯು.ಟಿ. ಖಾದರ್‌   

ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಇದೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಯು.ಟಿ. ಖಾದರ್‌ ವಿರುದ್ಧ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್‌ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಖಾದರ್‌, ‘ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯುತ್ತದೆ’ ಎಂದು ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಲ್ಲಿಕೆಯಾದ ದೂರನ್ನು ಆಧರಿಸಿ ಪಾಂಡೇಶ್ವರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಇದೇ ಭಾಷಣವನ್ನು ಉಲ್ಲೇಖಿಸಿ ಬಿಜೆಪಿ ಮುಖಂಡ ಸಂತೋಷ್‌ಕುಮಾರ್‌ ರೈ ಬೋಳಿಯಾರ್‌ ಅವರು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಅಲ್ಲಿನ ಪೊಲೀಸರು ಕಾನೂನು ತಜ್ಞರ ಸಲಹೆ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.