ADVERTISEMENT

ನಕಲಿ ಡಾಕ್ಟರೇಟ್‌ ನೀಡಿದರೆ ಎಫ್‌ಐಆರ್‌: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 21:36 IST
Last Updated 23 ಸೆಪ್ಟೆಂಬರ್ 2021, 21:36 IST
   

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಸಂಸ್ಥೆಗಳು ನಕಲಿ ಅಥವಾ ಅನಧಿಕೃತ ಪದವಿ, ಡಾಕ್ಟರೇಟ್‌ ನೀಡುವುದು ಕಂಡುಬಂದಲ್ಲಿ ಎಫ್‌ಐಆರ್‌ ದಾಖಲಿಸುವಂತೆ 2021ರ ಫೆಬ್ರುವರಿ 26ರಂದು ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗುರುವಾರ ಬಿಜೆಪಿಯ ಡಾ. ತೇಜಸ್ವಿನಿ ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 23 ಸರ್ಕಾರಿ ವಿಶ್ವವಿದ್ಯಾಲಯಗಳಿವೆ. ಅವುಗಳು ಈವರೆಗೆ 1,856 ಜನರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿವೆ. 21 ಖಾಸಗಿ ವಿಶ್ವವಿದ್ಯಾಲಯಗಳಿದ್ದು, ಅವುಗಳಲ್ಲಿ ಐದು ವಿಶ್ವವಿದ್ಯಾಲಯಗಳು 23 ಮಂದಿಗೆ ಗೌರವ ಡಾಕ್ಟರೇಟ್‌ ನೀಡಿವೆ’ ಎಂದರು.

ವಿಶ್ವವಿದ್ಯಾಲಯಗಳಲ್ಲಿ ಗೌರವ ಡಾಕ್ಟರೇಟ್‌ ನೀಡುವುದಕ್ಕೆ ನಿಯಮಾವಳಿಗಳಿವೆ. ಅವುಗಳ ಅಡಿಯಲ್ಲಿ ಸೂಕ್ತ ಪ್ರಕ್ರಿಯೆ ನಡೆಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುತ್ತದೆ. ವಿಶ್ವವಿದ್ಯಾಲಯಗಳು ಶಿಫಾರಸು ಮಾಡುವ ಹೆಸರುಗಳನ್ನು ರಾಜ್ಯಪಾಲರು ನೇಮಿಸುವ ತಜ್ಞರ ಸಮಿತಿಯ ಪರಿಶೀಲನೆಗೂ ಒಳಪಡಿಸಲಾಗುತ್ತದೆ. ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಗೌರವ ಡಾಕ್ಟರೇಟ್‌ ನೀಡುವುದರಲ್ಲಿ ಯಾವುದೇ ಲೋಪ ಕಂಡುಬಂದಿಲ್ಲ ಎಂದು ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.