ADVERTISEMENT

ಪುಲ್ವಾಮದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ

ಹುಡುಕಾಟ ಕಾರ್ಯಾಚರಣೆ ವೇಳೆ ಉಗ್ರರಿಂದ ಗುಂಡಿನ ದಾಳಿ

ಪಿಟಿಐ
Published 18 ಮಾರ್ಚ್ 2023, 2:58 IST
Last Updated 18 ಮಾರ್ಚ್ 2023, 2:58 IST
   

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ, ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉಗ್ರರು ಅಡಗಿದ್ದಾರೆ ಎನ್ನುವ ಖಚಿತ ಮಾಹಿತಿ ಮೆರೆಗ ದಕ್ಷಿಣ ಕಾಶ್ಮೀರದ ಪುಲ್ವಾಮ ಪ್ರದೇಶದಲ್ಲಿ ಉಗ್ರರ ವಿರುದ್ಧ ಸೇನಾ ಪಡೆಗಳು ಹುಡುಕಾಟ ಕಾರ್ಯಾಚರಣೆ ಆರಂಭಿಸಿತ್ತು.

ಕಾರ್ಯಾಚರಣೆ ವೇಳೆ ಉಗ್ರರು, ಸೇನಾಪಡೆಗಳ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದಕ್ಕೆ ಸೇನಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ADVERTISEMENT

ಗುಂಡಿನ ಚಕಮಕಿ ಮುಂದುವರಿದಿದ್ದು, ಎರಡೂ ಕಡೆಯಿಂದ ಯಾವುದೇ ಸಾವು ನೋವು ಆಗಿರುವ ಬಗ್ಗೆ ವರದಿ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.