ADVERTISEMENT

ಮೈಸೂರಿನ ಮೆಗಾ ಮೆಡಿಕಲ್ಸ್ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 3:17 IST
Last Updated 20 ಜೂನ್ 2020, 3:17 IST
ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.
ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.   
""
""

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಮೂರು ಮಹಡಿ ಕಟ್ಟಡದಲ್ಲಿ ನಸುಕಿನ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತು. 9 ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಿಕೊಳ್ಳಲಾಯಿತು. 60 ಮಂದಿ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

'ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ. ಬೆಳಿಗ್ಗೆಯಷ್ಟೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ನಷ್ಟದ ಅಂದಾಜು ಇನ್ನಷ್ಟೇ ನಡೆಯಬೇಕಿದೆ' ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಕಾರ್ಯಾಚರಣೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ರಾಜು, ನವೀನ್, ಗಂಗಾನಾಯಕ ಹಾಗೂ ಭರತ್ ಕುಮಾರ್, ಠಾಣಾಧಿಕಾರಿಗಳಾದ ಗಂಗಾಧರ, ನಾಗರಾಜುಅರಸ್, ಶಿವಸ್ವಾಮಿ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.