ಬೆಂಗಳೂರು: ರಾಜ್ಯದಲ್ಲಿ ಹಾಲಿ ಇರುವ ಮತ್ತು ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ 1ರ ದರದಲ್ಲಿ ‘ಫೈರ್ ಸೆಸ್’ ವಸೂಲು ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ಕರ್ನಾಟಕ ಅಗ್ನಿಶಾಮಕ (ತಿದ್ದುಪಡಿ) ಮಸೂದೆ 2025 ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಹುಮಹಡಿ ಕಟ್ಟಡಗಳು, ಆಸ್ಪತ್ರೆ, ಕೈಗಾರಿಕೆಗಳು ಸೇರಿ ಅಗ್ನಿ ಸುರಕ್ಷತಾ ಕಾಯ್ದೆ ಅನ್ವಯ ಆಗುವ ಎಲ್ಲ ಕಟ್ಟಡಗಳಿಂದಲೂ ಸೆಸ್ ಸಂಗ್ರಹಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಈ ಮಸೂದೆಯನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.