ADVERTISEMENT

ಶಿವಮೊಗ್ಗದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 7:40 IST
Last Updated 17 ಜೂನ್ 2020, 7:40 IST
ಕೊರೊನಾ ವೈರಸ್‌ಗೆ ಶಿವಮೊಗ್ಗದಲ್ಲಿ ಮಹಿಳೆ ಸಾವು (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ಗೆ ಶಿವಮೊಗ್ಗದಲ್ಲಿ ಮಹಿಳೆ ಸಾವು (ಸಾಂದರ್ಭಿಕ ಚಿತ್ರ)   

ಶಿವಮೊಗ್ಗ: ಚನ್ನಗಿರಿ ಮೂಲದ 70 ವರ್ಷದ ಮಹಿಳೆ ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಮೆಗ್ಗಾನ್ ಕೋವಿಡ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲವ್ಯಾದಿ ಮತ್ತು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.

ಸಾವಿನ ನಂತರ ಕೊರೋನ ಸೋಂಕು ಇರುವುದು ದೃಢಪಟ್ಟಿದೆ.

ADVERTISEMENT

ಮಹಿಳೆ ದಾವಣಗೆರೆಯ ಮಗಳ ಮನೆಗೆ ಹೋಗಿಬಂದ ನಂತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.