ಕಾರವಾರ: ಕರ್ನಾಟಕದ ಮೀನು ತುಂಬಿದ ಲಾರಿಗಳಿಗೆ ಗೋವಾ ಪ್ರವೇಶ ನಿರ್ಬಂಧಕ್ಕೆ ಪ್ರತಿಯಾಗಿ ರಾಜ್ಯದ ಮೀನುಗಾರರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ರಾಜ್ಯದ ಗಡಿ ಮಾಜಾಳಿ ಚೆಕ್ ಪೋಸ್ಟ್‌ನಲ್ಲಿ ಮೀನುಗಾರರು ಮತ್ತು ವ್ಯಾಪಾರಸ್ಥರು ಗೋವಾದಿಂದ ಬರುತ್ತಿರುವ ಮೀನು ತುಂಬಿದ ಲಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಭಟ್ಕಳ, ಹೊನ್ನಾವರ, ಬೇಲೇಕೇರಿ, ಅಂಕೋಲಾ, ಕಾರವಾರ ತಾಲ್ಲೂಕುಗಳ ಮೀನುಗಾರರು, ವ್ಯಾಪಾರಿಗಳು ಭಾಗವಹಿಸಿದ್ದಾರೆ.
‘ಫಾರ್ಮಲಿನ್ ನೆಪದಲ್ಲಿ ಗೋವಾ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಅಲ್ಲಿನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇಲ್ಲಿನ ಮೀನುಗಾರರ ಹಿತಾಸಕ್ತಿ ಬಲಿಯಾಗುತ್ತಿದೆ. ತಕ್ಷಣ ರಾಜ್ಯ ಸರ್ಕಾರ ಗೋವಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು’ಎಂದು ಪರ್ಸೀನ್ ದೋಣಿಗಳ ಮಾಲೀಕರ ಸಂಘದ ಅಧ್ಯಕ್ಷ ಬಾಬು ಕುಬಾಲ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.