ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಲ್ಲಿ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕೆ ಅನುಗುಣವಾಗಿ ಒಂದು ವರ್ಷದ ಅವಧಿಗೆ ವಿಸ್ತರಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
11 ರಿಂದ 40 ಹೆಕ್ಟೇರ್‌ವರೆಗಿನ ಪಂಚಾಯತ್ ಕೆರೆಗಳಿಗೆ ಸಂಬಂಧಿಸಿದಂತೆ ಮೀನು ಪಾಶುವಾರು ಹಕ್ಕಿನ ಅವಧಿಯನ್ನು 2023–24 ನೇ ಸಾಲಿಗೆ ನವೀಕರಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಟೆಂಡರ್‌ದಾರರಿಗೆ ಪ್ರಕರಣಕ್ಕೆ ಅನುಗುಣವಾಗಿ ಒಂದು ವರ್ಷ ಅವಧಿ ಗುತ್ತಿಗೆಯನ್ನು ಪಾವತಿ ಸಹಿತ ವಿಸ್ತರಿಸಲು ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಆವರು ಪತ್ರ ಆಧರಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.