ADVERTISEMENT

ಚಾಲಕನ ಕೊಲೆ: ಐವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 8:56 IST
Last Updated 17 ಏಪ್ರಿಲ್ 2021, 8:56 IST

ಬಾಗಲಕೋಟೆ:ಜಮಖಂಡಿ ತಾಲ್ಲೂಕಿನ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ತಡೆದು ಚಾಲಕ ನಬಿ ರಸೂಲ್ ಆವಟಿ (59) ಅವರನ್ನು ಕಲ್ಲು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಸಾವಳಗಿ ಠಾಣೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.

ವಾಯವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿಗಳಾದ ಮಲ್ಲಪ್ಪ ತಳವಾರ, ಚೇತನ ಕರ್ವೆ, ಸದಾಶಿವ ಕಂಕಣವಾಡಿ, ಲೋಹಿತ್ ದಾಸರ ಹಾಗೂ ಅರುಣ್ ಅರಕೇರಿ ಬಂಧಿತರು ಎಂದು ತಿಳಿದುಬಂದಿದೆ.

ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್‌ಗಳು ಸಂಚಾರ ಮಾಡಬಾರದು ಹಾಗೂ ಸಾರ್ವಜನಿಕವಾಗಿ ಆತಂಕದ ವಾತಾವರಣ ಸೃಷ್ಟಿಯಾಗಬೇಕು ಎಂಬ ಕಾರಣಕ್ಕೆ ಆರೋಪಿಗಳು ನಬಿ ಅವರ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿರುವ ಪೊಲೀಸರು, ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.