ವಿಧಾನಸೌಧ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಮೈಸೂರಿನ ವಕೀಲರಾದ ಶಿವಣ್ಣ ಗೌಡ, ಕಲಬುರಗಿ ವಕೀಲ ಚಂದ್ರಪ್ಪ, ಧಾರವಾಡದ ನಿವೃತ್ತ ಪ್ರಾಶುಪಾಲ ಸಿ.ಎಂ. ಕುಂದಗೋಳ, ನಿವೃತ್ತ ಐಎಫ್‌ಎಸ್ ಅಧಿಕಾರಿ ಜಿ.ಎನ್. ಶ್ರೀಕಂಠಯ್ಯ, ಮಂಗಳೂರಿನ ಪ್ರತಿಭಾ ಕುಲಾಯಿ ಅವರನ್ನು ನೇಮಕ ಮಾಡಲಾಗಿದೆ.
ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಅಡ್ವೊಕೇಟ್ ಜನರಲ್ ಮಧುಸೂದನ್ ಆರ್. ನಾಯಕ್ ಅವರನ್ನು ನೇಮಿಸಿ ಸರ್ಕಾರ ಜನವರಿ 31ರಂದು ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.