ADVERTISEMENT

ಕೃಷ್ಣಾನದಿ ಪ್ರವಾಹ ಇಳಿಮುಖ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2019, 12:59 IST
Last Updated 10 ಸೆಪ್ಟೆಂಬರ್ 2019, 12:59 IST

ರಾಯಚೂರು: ನಾರಾಯಣಪುರ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣವು 1,12,770 ಕ್ಯುಸೆಕ್‌ಗೆ ಇಳಿಮುಖವಾಗಿದೆ.

ಒಳಹರಿವು 1,6 ಲಕ್ಷ ಕ್ಯುಸೆಕ್‌ ಇದ್ದು, ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆಯು ಸಂಚಾರಕ್ಕೆ ಮುಕ್ತವಾಗಿದೆ. ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆಯು ಇನ್ನೂ ಮುಳುಗಡೆಯಾಗಿದೆ. ನದಿತೀರ ಪ್ರದೇಶದಲ್ಲಿ ಜಿಲ್ಲಾಡಳಿತವು ಕಟ್ಟೆಚ್ಚರ ಮುಂದುವರಿಸಿದೆ.

ಮಹಾರಾಷ್ಟ್ರದ ಕೊಯ್ನಾ ಜಲಾಶಯದ ಹೊರಹರಿವು ಸಂಪೂರ್ಣ ಸ್ಥಗಿತವಾಗಿದೆ. ಹೀಗಾಗಿ ಕೃಷ್ಣಾನದಿಯಲ್ಲಿ ಪ್ರವಾಹ ಶೀಘ್ರದಲ್ಲಿ ಸಾಮಾನ್ಯ ಸ್ಥಿತಿಗೆ ತಲುಪಲಿದೆ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.