ADVERTISEMENT

ನೆರೆ ಸಂತ್ರಸ್ತರ ಸೂರಿಗೆ ₹66 ಕೋಟಿ ಬಿಡುಗಡೆ: ಕಂದಾಯ ಸಚಿವ ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 18 ಮೇ 2020, 12:15 IST
Last Updated 18 ಮೇ 2020, 12:15 IST
ಕಂದಾಯ ಸಚಿವ ಆರ್‌.ಅಶೋಕ
ಕಂದಾಯ ಸಚಿವ ಆರ್‌.ಅಶೋಕ   

ಬೆಂಗಳೂರು: ಕಳೆದ ವರ್ಷ ಪ್ರವಾಹ ಪೀಡಿತ ಪ್ರದೇಶದ ಸಂತ್ರಸ್ತರಿಗೆ ಮನೆ ಕಟ್ಟಿಕೊಳ್ಳಲು ಮೂರನೇ ಕಂತಿನ ಹಣ ₹66 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಈಗಾಗಲೇ ಒಂದನೆ ಮತ್ತು ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದೇವೆ. ಸಿಮೆಂಟ್,‌ ಮರಳು ಮತ್ತು ಇತರ ವಸ್ತುಗಳು ಸಿಗದೇ ಇರುವುದು ಹಾಗೂ ಕಾರ್ಮಿಕರ ಕೊರತೆಯಿಂದ ಕೆಲಸ ಆರಂಭವಾಗಿರಲಿಲ್ಲ. ಇದರಿಂದಾಗಿ ಮೂರನೇ ಕಂತು ಬಿಡುಗಡೆ ಮಾಡಿರಲಿಲ್ಲ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೂರನೇ ಕಂತಿನಲ್ಲಿ ತಲಾ₹ 1 ಲಕ್ಷ ಕೊಡಬೇಕಿದೆ. ಅದಕ್ಕಾಗಿ ₹66 ಕೋಟಿ ಬಿಡುಗಡೆ ಮಾಡಲಿದ್ದೇವೆ ಎಂದೂ ಅಶೋಕ ಹೇಳಿದರು.

ADVERTISEMENT

ಕ್ವಾರಂಟೈನ್‌, ಆರೋಗ್ಯ ತಪಾಸಣೆಯಿಂದ ಬಿಇಎಂಪಿ ಮೇಲೆ ಖರ್ಚು– ವೆಚ್ಚದ ಹೊರೆ ಹೆಚ್ಚಾಗಿದೆ. ಆದ್ದರಿಂದ ಎನ್‌ಡಿಆರ್‌ಎಫ್‌ನಿಂದ ₹25 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಅಶೋಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.