ADVERTISEMENT

ಪ್ರವಾಹ: ಸಾಂಕ್ರಾಮಿಕ ರೋಗದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 19:48 IST
Last Updated 7 ಸೆಪ್ಟೆಂಬರ್ 2022, 19:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಪ್ರವಾಹ ಸ್ಥಿತಿ ನಿರ್ಮಾಣ ವಾಗಿದೆ. ಆ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಕ್ರಮ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರ ಡುವ ಸಾಧ್ಯತೆ ಹೆಚ್ಚಿದೆ. ಪರಿಸ್ಥಿತಿಗೆ ತುರ್ತಾಗಿ ಸ್ಪಂದಿಸಲು, ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗೆ ಎಲ್ಲ ಹಂತದ ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಾಂಕ್ರಾಮಿಕ ನಿರ್ವಹಣೆಗೆ ಸಮಗ್ರ ಕ್ರಿಯಾ ಯೋಜನೆ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರಬೇಕು. ಮಾನವ ಸಂಪನ್ಮೂಲ, ಪರೀಕ್ಷೆಯ ಕಿಟ್‌, ಔಷಧಗಳು, ರಾಸಾ ಯನಿಕಗಳು ಹಾಗೂ ಉಪಕರಣಗಳು ಅಗತ್ಯ ಪ್ರಮಾ ಣದಲ್ಲಿ ಇಟ್ಟುಕೊಳ್ಳಬೇಕು ಎಂದು ಇಲಾಖೆ ಹೇಳಿದೆ.

ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ತ್ವರಿತ ಪ್ರತಿಕ್ರಿಯಾ ತಂಡಗಳು ಸನ್ನದ್ಧವಾಗಿ ರಬೇಕು. ಪ್ರವಾಹ ಪೀಡಿತವಾಗಿರುವಂತಹ ವಾರ್ಡ್‌ ಗಳಲ್ಲಿ ಸೂಕ್ಷ್ಮ ಯೋಜನೆಗಳನ್ನು ಸಿದ್ಧಪಡಿಸಿಕೊಂಡು, ತುರ್ತು ಪರಿಸ್ಥಿತಿಗೆ ಶೀಘ್ರ ಸ್ಪಂದಿಸಬೇಕು. ಕೀಟಶಾಸ್ತ್ರೀಯ ಸೂಚ್ಯಂಕಗಳನ್ನು ಮುಂಚಿತವಾಗಿಯೇ ವಿಶ್ಲೇಷಿಸಿ, ಉಲ್ಬಣಿಸಬಹುದಾದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.

ADVERTISEMENT

ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಸರ್ವೇಕ್ಷಣೆ ಹಾಗೂ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಗತ್ಯ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.