ಬೆಂಗಳೂರು: ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲ್ಲ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ನಾವು ಅನುಸರಿಸುವುದಿಲ್ಲ ಎಂದು ಅತೃಪ್ತ ಶಾಸಕ ಎಸ್.ಟಿ.ಸೋಮಶೇಖರ್ ವಿಡಿಯೊ ಮುಖಾಂತರ ತಿಳಿಸಿದ್ದಾರೆ.
ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗುವ ಕೆಲವೇ ನಿಮಿಷಗಳ ಮೊದಲು ವಿಡಿಯೊವನ್ನು ಬಿಡುಗಡೆ ಮಾಡಿದ್ದಾರೆ.
ಮುನಿರತ್ನ, ಬೈರತಿ ಬಸವರಾಜ್, ರಾಮಲಿಂಗಾರೆಡ್ಡಿ ಹಾಗೂ ನಾನು ಒಟ್ಟಾಗಿ ರಾಜೀನಾಮೆ ಕೊಟ್ಟಿದ್ದೇವು. ಒಮ್ಮೆ ರಾಜೀನಾಮೆ ನೀಡಿದ ಬಳಿಕ ಮತ್ತೆ ವಾಪಾಸು ಪಡೆಯಬಾರದು ಎಂದುನಾವು ಒಟ್ಟಾಗಿ ಕುಳಿತು ಮಾತನಾಡಿಕೊಂಡಿದ್ದೇವು. ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ವಾಪಾಸು ಪಡೆಯುವುದಾಗಿ ಹೇಳಿರುವುದನ್ನು ನಾವು ಮಾಧ್ಯಮಗಳ ಮೂಲಕ ಗಮನಿಸಿದ್ದೇವೆ.
ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲ್ಲ ಹಾಗೂ ರಾಮಲಿಂಗಾರೆಡ್ಡಿ ಅವರನ್ನು ಅನುಸರಿಸುವುದಿಲ್ಲ ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.