ADVERTISEMENT

ಗಾಂಧೀಜಿ ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ಜೀವನದ ಗುರಿಯಾಗಲಿ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 7:11 IST
Last Updated 30 ಜನವರಿ 2021, 7:11 IST
ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ
ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ    

ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಶಿಸಿದರು.

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು.

‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ ಸಚಿವರು ಸೇರಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ’ ಎಂದರು.

ADVERTISEMENT

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವ ಆರ್. ಅಶೋಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಂಕುಸ್ಥಾಪನೆ: ಬಳಿಕ ವಿಧಾನಸೌಧದದ ಸಮಿತಿ ಕೊಠಡಿಯಲ್ಲಿ ವರ್ಚುವಲ್‌ ಮುಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ನಿಲಯ ಸ್ಥಾಪನೆಗೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು.

ವಿಧಾನ ಸಭಾಧ್ಯಕ್ಷ‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸುರೇಶ್ ಕುಮಾರ್, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿ, ಮೋಹನ್ ಕೊಂಡಜ್ಜಿ, ತೇಜಸ್ವಿನಿ ರಮೇಶ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.