ADVERTISEMENT

ರಾಜ್ಯದಲ್ಲಿ ಆಹಾರ ಪದಾರ್ಥ ತಪಾಸಣೆ: ₹ 6.31 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 22:30 IST
Last Updated 31 ಆಗಸ್ಟ್ 2024, 22:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಬೆಂಗಳೂರು: ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ‌ಎರಡು ದಿನಗಳ ಅವಧಿಯಲ್ಲಿ ರಾಜ್ಯದ 2,820 ಕಡೆ ತಪಾಸಣೆ ನಡೆಸಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು, ಸ್ವಚ್ಛತೆ ಕಾಯ್ದುಕೊಳ್ಳದಿರುವಿಕೆ ಸೇರಿ ವಿವಿಧ ಕಾರಣಕ್ಕೆ ₹ 6.31 ಲಕ್ಷ ದಂಡ ವಿಧಿಸಿದ್ದಾರೆ. 

ಆಹಾರ ಪದಾರ್ಥಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇಲಾಖೆಯು ವಿಶೇಷ ಆಂದೋಲನ ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಬೀದಿ ಬದಿಯಲ್ಲಿನ ತಿನಿಸುಗಳನ್ನು ಶುಕ್ರವಾರ ಹಾಗೂ ಶನಿವಾರ ತಪಾಸಣೆ ನಡೆಸಿ, ಮಾದರಿಗಳನ್ನು ಸಂಗ್ರಹಿಸಲಾಯಿತು. 

ADVERTISEMENT

ತಪಾಸಣೆಗೆ ಒಳಪಟ್ಟ ಮಳಿಗೆಗಳ ಪೈಕಿ ಪರವಾನಗಿ ಅಥವಾ ನೋಂದಣಿ ಮಾಡಿಸಿಕೊಳ್ಳದ 666, ಶುಚಿತ್ವ ಕಾಯ್ದುಕೊಳ್ಳದ 1,080 ಹಾಗೂ ಆಹಾರದ ಪೊಟ್ಟಣಗಳ ಮೇಲೆ ಅದರ ಗುಣಮಟ್ಟದ ಕುರಿತ ಮಾಹಿತಿ ಹೊಂದಿರದ 24 ಮಳಿಗೆಗಳು ಸೇರಿ ಒಟ್ಟು 1,770 ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. 

ಸಂಗ್ರಹಿಸಿದ ಆಹಾರ ಪದಾರ್ಥಗಳ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.