ADVERTISEMENT

ವರ್ಷಾಂತ್ಯದವರೆಗೆ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ನಿರ್ಬಂಧ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 2:29 IST
Last Updated 24 ಸೆಪ್ಟೆಂಬರ್ 2025, 2:29 IST
<div class="paragraphs"><p>ಎ.ಐ ಚಿತ್ರ</p></div>

ಎ.ಐ ಚಿತ್ರ

   

ಬೆಂಗಳೂರು: ಪ್ರಸಕ್ತ ವರ್ಷದ (2025) ಅಂತ್ಯದವರೆಗೆ ಎಲ್ಲ ಅಧಿಕೃತ ವಿದೇಶ ಪ್ರವಾಸಗಳಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ತಕ್ಷಣದಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ. 

ADVERTISEMENT

ಅಲ್ಲದೆ, 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ ಇದೇ ಜುಲೈ ತಿಂಗಳವರೆಗೆ ಸರ್ಕಾರಿ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿದ, ಕಲಿಕೆ ಹಾಗೂ ಶಿಫಾರಸುಗಳೊಂದಿಗೆ ಒಂದು ವಾರದ ಒಳಗೆ ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಸಬೇಕು ಎಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

‘ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಹಲವು ಅಧಿಕಾರಿಗಳು ಸಲ್ಲಿಸದಿರುವುದು ಗಮನಕ್ಕೆ ಬಂದಿದೆ. ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವ ಸಲ್ಲಿಸುವ ಮೊದಲು ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿಯನ್ನು ನೀಡಿದ್ದರೆ  ಮಾತ್ರ, ಹಾಲಿ ಪ್ರವಾಸದ ಪ್ರಸ್ತಾವಕ್ಕೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುವುದು’ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.