ADVERTISEMENT

ಅರಣ್ಯವಾಸಿಗಳಿಗೆ ಅರಣ್ಯ ಸಂರಕ್ಷಣೆಯ ಹೊಣೆ: ಸಿ.ಎಂ.

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2019, 20:17 IST
Last Updated 3 ಮಾರ್ಚ್ 2019, 20:17 IST

ತೀರ್ಥಹಳ್ಳಿ: ‘ಅರಣ್ಯ ಸಂರಕ್ಷಣೆ ಕಾಯ್ದೆ ತಿದ್ದುಪಡಿ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಅರಣ್ಯವಾಸಿಗಳಿಗೆ ಅರಣ್ಯ ಸಂರಕ್ಷಣೆಯ ಹೊಣೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ತೀರ್ಥಹಳ್ಳಿಯಲ್ಲಿ ಒಕ್ಕಲಿಗರ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಅರಣ್ಯ ಇಲಾಖೆಗೆ ಸೇರಿದ ಕಂದಾಯ ಭೂಮಿಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಂಸತ್ತಿನಲ್ಲಿ ಹೋರಾಟ ಮಾಡಿ ಬಿಡಿಸಿಕೊಟ್ಟಿದ್ದರು. ಆದರೆ, ಅಧಿಕಾರಿಗಳು ಅದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಸುಪ್ರೀಂ ಕೋರ್ಟ್ ನೀಡಿದ ಅರಣ್ಯವಾಸಿಗಳ ತೆರವು ಆದೇಶಕ್ಕೆ ತಡೆಯಾಜ್ಞೆ ಸಿಕ್ಕಿದೆ. ಈ ಆದೇಶವನ್ನು ಮಾರ್ಪಾಡು ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಪರಿಶೀಲನಾ ಸಭೆಯನ್ನು ಶೀಘ್ರ ನಡೆಸುತ್ತೇನೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.