ADVERTISEMENT

ಕಪ್ಪತ್ತಗುಡ್ಡಕ್ಕೆ ಮತ್ತೆ ಬೆಂಕಿ | ನಂದಿಸಲು ಹರಸಾಹಸ: ಔಷಧೀಯ ಸಸ್ಯಗಳು ಬೆಂಕಿಗೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 0:15 IST
Last Updated 4 ಮಾರ್ಚ್ 2023, 0:15 IST
ಡಂಬಳದ ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶಕ್ಕೆ ಬೆಂಕಿ ಹತ್ತಿರುವುದು
ಡಂಬಳದ ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶಕ್ಕೆ ಬೆಂಕಿ ಹತ್ತಿರುವುದು   

ಡಂಬಳ: ಕಪ್ಪತ್ತಗುಡ್ಡದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ 2ಗಂಟೆಗೆ ಡಂಬಳ ಹೋಬಳಿ ಡೋಣಿತಾಂಡ ಹತ್ತಿರದ ದಟ್ಟ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಬಾದೆ ಹುಲ್ಲು ಸುಟ್ಟು ನಾಶವಾಗಿದೆ.

ವಲಯ ಅರಣ್ಯಾಧಿಕಾರಿ ವೀರೇಂದ್ರ ಮರಿಬಸಣ್ಣವರ ನೇತೃತ್ವ ಹಾಗೂ ಸಿಬ್ಬಂದಿಯ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ರಾತ್ರಿ 10 ಗಂಟೆಯವರೆಗೂ ಮುಂದುವರಿದಿದ್ದು, ಅಂದಾಜು 25 ಹೆಕ್ಟೇರ್ ಅರಣ್ಯ ಪ್ರದೇಶದ ಆಹುತಿಯಾಗಿದೆ. ಬೇಸಿಗೆ ಸಮಯದಲ್ಲಿ ಹೆಚ್ಚುವರಿ ಸಿಬ್ಬಂದಿ ಹಾಗೂ ಬೆಂಕಿ ನಂದಿಸಲು ಆಧುನಿಕ ಸಲಕರಣೆ ನೀಡಬೇಕು’ ಎಂದು ಇಲಾಖೆ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಯೊಂದಿಗೆ ನೋವು ಹಂಚಿಕೊಂಡರು.

‘ಯಾವುದೇ ಔಷಧಿ ಸಸ್ಯಗಳು ಬೆಂಕಿಗೆ ಆಹುತಿಯಾಗಿಲ್ಲ. ಬಾದೆ ಹುಲ್ಲು ಮಾತ್ರ ಸುಟ್ಟಿದೆ. ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ’ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.