ADVERTISEMENT

ರಮೇಶ್‌ ಕುಮಾರ್ ಪ್ರಕರಣ: ವರದಿ ಸಲ್ಲಿಕೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 18:09 IST
Last Updated 18 ನವೆಂಬರ್ 2025, 18:09 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಹೊಸಹೂಡ್ಯ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದ ಸರ್ವೇ ನಂಬರ್‌ 1 ಮತ್ತು 2ರಲ್ಲಿ ಕಂದಾಯ ಭೂಮಿ ಹಾಗೂ ಅರಣ್ಯ ಪ್ರದೇಶದ ಗಡಿಯನ್ನು ಗುರುತಿಸಿ ಸೀಮಿತ ಅವಧಿಯಲ್ಲಿ ಸರ್ವೆ ನಕ್ಷೆ ಸಿದ್ಧಪಡಿಸಬೇಕು ಎಂಬ ಕಂದಾಯ ಇಲಾಖೆ ಆದೇಶಕ್ಕೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಶ್ರೀನಿವಾಸಪುರ ತಾಲ್ಲೂಕಿನ ಕುಂದಿಟಿವಾರಪಲ್ಲಿ ನಿವಾಸಿಯೂ ಆದ ಹೈಕೋರ್ಟ್‌ ವಕೀಲ ಕೆ.ವಿ.ಶಿವಾರೆಡ್ಡಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಕೆ.ಎಸ್‌.ನರೇಂದ್ರಬಾಬು ಅವರ ವಾದ ಆಲಿಸಿದ ನ್ಯಾಯಪೀಠ, ‘ವಸ್ತುಸ್ಥಿತಿ ವರದಿ ಸಲ್ಲಿಸಿ’ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿದೆ. ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ (74) ಅವರು ಈ ಪ್ರಕರಣದಲ್ಲಿ ಅರಣ್ಯ ಒತ್ತುವರಿ ಆರೋಪ ಎದುರಿಸುತ್ತಿರುವ ಪ್ರತಿವಾದಿಯಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.