ADVERTISEMENT

ಕಾಂಗ್ರೆಸ್‌ ಸೇರಿದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2023, 10:28 IST
Last Updated 20 ಅಕ್ಟೋಬರ್ 2023, 10:28 IST
   

ಬೆಂಗಳೂರು: ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿಗೆ ‘ಆಪರೇಷನ್‌ ಹಸ್ತ’ದ ಮೂಲಕ ಕಾಂಗ್ರೆಸ್‌ ಆಘಾತ ನೀಡಿದೆ.

ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ.ಪೂರ್ಣಿಮಾ ಅವರನ್ನು ಪಕ್ಷಕ್ಕೆ ಸೆಳೆದ ‘ಕೈ’ ಪಾಳೆಯ ರಾಜಕೀಯ ದಾಳ ಉರುಳಿಸುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು (ಶುಕ್ರವಾರ) ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್‌ಗೆ ಸೇರಿದರು.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ‘ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿಯ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಯಾದವ ಸಂಘದ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್‌, ಬಿಜೆಪಿಯ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರು ಇಂದು ಪಕ್ಷಕ್ಕೆ ಸೇರಿದ್ದಾರೆ. ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.