ಬೆಂಗಳೂರು: ತಮಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಪತ್ರ ಬರೆದಿದ್ದಾರೆ.
ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೆ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿತ್ತು.
‘ನಿಕಟ ಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು’ ಎಂದು ಪತ್ರದಲ್ಲಿ ಯಡಿಯೂರಪ್ಪ ಅವರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.