ADVERTISEMENT

ಜೂನ್‌ 6ಕ್ಕೆ ಎಸ್.ಆರ್.ಬೊಮ್ಮಾಯಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2023, 7:47 IST
Last Updated 5 ಜೂನ್ 2023, 7:47 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್. ಬೊಮ್ಮಾಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ (ಜೂನ್‌ 6) ಸಂಜೆ 5 ಗಂಟೆಗೆ ನಡೆಯಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ನಮ್ಮ ತಂದೆ ದಿವಂಗತ ಎಸ್. ಆರ್. ಬೊಮ್ಮಾಯಿ ಅವರ 99 ಜನ್ಮ ದಿನಾಚರಣೆಯನ್ನು ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಎಜುಕೇಷನ್ ಮತ್ತು ವೆಲ್‌ಫೇರ್ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

‘ದಿ.ಎಸ್. ಆರ್. ಬೊಮ್ಮಾಯಿ ಅವರ ಕುರಿತು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಹೊರತಂದಿರುವ ‘ಕಾಫಿ ಟೇಬಲ್’ ಪುಸ್ತಕವನ್ನು ಎಸ್.ಎಂ. ಕೃಷ್ಣ ಬಿಡುಗಡೆ ಮಾಡಲಿದ್ದಾರೆ‌. ಅಧ್ಯಕ್ಷತೆಯನ್ನು ಶಾಸಕ ಆರ್.ವಿ. ದೇಶಪಾಂಡೆ ವಹಿಸಲಿದ್ದಾರೆ‌. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ. ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್‌. ಶಂಕರ್ ಅವರು ಕೃತಿ ಕುರಿತು ಮಾತನಾಡಲಿದ್ದಾರೆ’ ಎಂದು ತಿಳಿಸಿದ್ದಾರೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.