ADVERTISEMENT

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಸೋಂಕು: ಶೀಘ್ರ ಚೇತರಿಕೆಗೆ ಗಣ್ಯರ ಹಾರೈಕೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 3:49 IST
Last Updated 4 ಆಗಸ್ಟ್ 2020, 3:49 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ವೈರಸ್ ಸೋಂಕಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸೇರಿ ಹಲವು ನಾಯಕರು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ADVERTISEMENT

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಗಿದೆ. ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆಎಂದು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.